×
Ad

ಗಾಝಾ: ಇಸ್ರೇಲ್ ದಾಳಿಯಲ್ಲಿ 21 ಮಂದಿ ಮೃತ್ಯು

Update: 2025-06-26 20:16 IST

Photo: PIT

ಗಾಝಾ: ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ನ ವೈಮಾನಿಕ ದಾಳಿಯಲ್ಲಿ ಕನಿಷ್ಠ 21 ಫೆಲೆಸ್ತೀನೀಯರು ಸಾವನ್ನಪ್ಪಿದ್ದು ಇತರ ಹಲವರು ಗಾಯಗೊಂಡಿರುವುದಾಗಿ ಸ್ಥಳೀಯ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಗಾಝಾ ನಗರದ ಉಪನಗರ ಶೇಖ್ ರದ್ವಾನ್‍ನಲ್ಲಿ ಸ್ಥಳಾಂತರಿತ ಕುಟುಂಬದವರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಗಾಝಾದ ಖಾನ್‍ಯೂನಿಸ್ ನಗರದಲ್ಲಿನ ಶಿಬಿರದ ಮೇಲೆ ನಡೆದ ಮತ್ತೊಂದು ದಾಳಿಯಲ್ಲಿ 9 ಮಂದಿ ಸಾವನ್ನಪ್ಪಿದ್ದರೆ, ಮಧ್ಯ ಗಾಝಾದಲ್ಲಿ ವಿಶ್ವಸಂಸ್ಥೆಯ ನೆರವು ಸಾಗಿಸುವ ಟ್ರಕ್‍ ಗಳಿಗಾಗಿ ಕಾಯುತ್ತಿದ್ದವರ ಮೇಲೆ ಇಸ್ರೇಲ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು ಇತರ ಹಲವರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News