×
Ad

Gaza | ಇಸ್ರೇಲ್‌ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತ್ಯು

Update: 2026-06-20 23:39 IST

Photo Credit : news.un.org

ಗಾಝಾ, ಜೂ.20: ಶನಿವಾರ ಬೆಳಗ್ಗೆ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗಾಝಾ ನಗರದ ಅಪಾರ್ಟ್‌ಮೆಂಟ್‌ ಒಂದರ ಮೇಲೆ ದಾಳಿ ನಡೆದಿದ್ದು, ಕಟ್ಟಡದ ಒಂದು ಭಾಗ ನೆಲಸಮಗೊಂಡಿದೆ. ಜೀನಾ (4) ಮತ್ತು ಲಾನಾ (14) ಎಂಬ ಸಹೋದರಿಯರ ಮೃತದೇಹ ಪತ್ತೆಯಾಗಿದ್ದು, ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿದ್ದಾರೆ. ಸಾವು-ನೋವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಆರೋಗ್ಯ ಇಲಾಖೆಯ ಹೇಳಿಕೆ ತಿಳಿಸಿದೆ.

ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿರುವುದಾಗಿ ಇಸ್ರೇಲ್‌ ಸೇನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News