ಗಾಝಾ: ಇಸ್ರೇಲ್ ದಾಳಿಯಲ್ಲಿ 28 ಮಂದಿ ಮೃತ್ಯು
Update: 2025-07-26 23:24 IST
Photo credit: PTI
ಗಾಝಾ, ಜು.26: ಫೆಲೆಸ್ತೀನ್ ಪ್ರದೇಶದಾದ್ಯಂತ ಶುಕ್ರವಾರ ತಡರಾತ್ರಿಯಿಂದ ಇಸ್ರೇಲ್‍ನ ಮಿಲಿಟರಿ ಕಾರ್ಯಾಚರಣೆಯಲ್ಲಿ ಕನಿಷ್ಠ 28 ಜನರು ಸಾವನ್ನಪ್ಪಿರುವುದಾಗಿ ಗಾಝಾದ ನಾಗರಿಕ ರಕ್ಷಣಾ ಏಜೆನ್ಸಿ ಹೇಳಿದೆ.
ಗಾಝಾ ನಗರದಲ್ಲಿ ಸ್ಥಳಾಂತರಗೊಂಡ ಫೆಲೆಸ್ತೀನೀಯರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ . ಶುಕ್ರವಾರ ನೆರವು ವಿತರಣೆ ಕೇಂದ್ರದ ಬಳಿ ನಿಂತಿದ್ದವರ ಮೇಲೆ ಇಸ್ರೇಲ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಗಾಝಾದ ಇತರ ಕಡೆ ನಡೆದ ವೈಮಾನಿಕ ದಾಳಿಯಲ್ಲಿ 15 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಗಾಝಾದಲ್ಲಿ ಭಯೋತ್ಪಾದಕರ ಪ್ರಮುಖ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದೆ.