×
Ad

Gaza | ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ 9 ಮಂದಿ ಬಲಿ

Update: 2026-07-14 21:15 IST

Photo Credit : AP

ಗಾಝಾ, ಜು.14: ಮಂಗಳವಾರ ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿ ಮತ್ತು ಗುಂಡಿನ ದಾಳಿಗೆ 10 ವರ್ಷದ ಬಾಲಕ ಹಾಗೂ ಹಮಾಸ್‌ನ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಗಾಝಾದ ರಫಾದಲ್ಲಿ ಇಸ್ರೇಲಿ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ 10 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

ಗಾಝಾದ ಉತ್ತರದ ಜಬಾಲಿಯಾದಲ್ಲಿ ಹಮಾಸ್ ನೇತೃತ್ವದ ಪೊಲೀಸ್ ಠಾಣೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಜಬಾಲಿಯಾ ಪೊಲೀಸ್ ಪಡೆಯ ಮುಖ್ಯಸ್ಥ ಕರ್ನಲ್ ಮೊಹಮ್ಮದ್ ಮರ್ವಾನ್ ಸಲೇಮ್ ಮತ್ತು ಇತರ ಅಧಿಕಾರಿಗಳು ಸೇರಿದ್ದಾರೆ ಎಂದು ಹಮಾಸ್ ನೇತೃತ್ವದ ಆಂತರಿಕ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News