×
Ad

ಗಾಝಾ ಕದನ ವಿರಾಮ : ಮೊದಲ ಹಂತದ ಒಪ್ಪಂದಕ್ಕೆ ಪ್ರಧಾನಿ ಮೋದಿ ಸ್ವಾಗತ, ನೆತನ್ಯಾಹುಗೆ ಶ್ಲಾಘನೆ

Update: 2025-10-09 11:32 IST

ಪ್ರಧಾನಿ ನರೇಂದ್ರ ಮೋದಿ (PTI)

ಹೊಸದಿಲ್ಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಗಾಝಾ ಕದನ ವಿರಾಮ ಯೋಜನೆಯ ಮೊದಲ ಹಂತದ ಒಪ್ಪಂದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಗುರುವಾರ ಸ್ವಾಗತಿಸಿದ್ದಾರೆ.

ಇಸ್ರೇಲ್‌ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ನಾಯಕತ್ವವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಅಮರಿಕ ಅಧ್ಯಕ್ಷ ಟ್ರಂಪ್ ಅವರ ಕದನ ವಿರಾಮ ಯೋಜನೆಯ ಮೊದಲ ಹಂತದ ಒಪ್ಪಂದವನ್ನು ನಾವು ಸ್ವಾಗತಿಸುತ್ತೇವೆ. ಇದು ಪ್ರಧಾನಿ ನೆತನ್ಯಾಹು ಅವರ ಬಲವಾದ ನಾಯಕತ್ವದ ಪ್ರತಿಫಲವಾಗಿದೆ. ಒತ್ತೆಯಾಳುಗಳ ಬಿಡುಗಡೆ ಮತ್ತು ಗಾಝಾದ ಜನರಿಗೆ ಮಾನವೀಯ ನೆರವು ಒದಗಿಸುವುದು ಅವರಿಗೆ ತಾತ್ಕಾಲಿಕ ವಿಶ್ರಾಂತಿ ನೀಡುವ ಜೊತೆಗೆ ಶಾಶ್ವತ ಶಾಂತಿಗೆ ದಾರಿ ಮಾಡಿಕೊಡಲಿದೆ" ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್ ಮೂಲಕ ಈ ಒಪ್ಪಂದವನ್ನು ಘೋಷಿಸಿ, ಇದನ್ನು “ ಶಾಶ್ವತ ಶಾಂತಿಯತ್ತ ಮೊದಲ ಹೆಜ್ಜೆ” ಎಂದು ಹೇಳಿದ್ದಾರೆ. 

“ಇಸ್ರೇಲ್ ಮತ್ತು ಹಮಾಸ್ ಎರಡೂ ನಮ್ಮ ಕದನ ವಿರಾಮ ಯೋಜನೆಯ ಮೊದಲ ಹಂತಕ್ಕೆ ಸಹಿ ಹಾಕಿವೆ. ಇದರಂತೆ ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗುವುದು ಹಾಗೂ ಇಸ್ರೇಲ್ ತನ್ನ ಸೈನಿಕರನ್ನು ಹಿಂತೆಗೆದುಕೊಳ್ಳುತ್ತದೆ. ಎಲ್ಲರೂ ನ್ಯಾಯಯುತವಾಗಿ ನಡೆದುಕೊಳ್ಳುತ್ತಾರೆ. ಇದು ಇಸ್ರೇಲ್, ಫೆಲೆಸ್ತೀನ್, ಅರಬ್ ಹಾಗೂ ಮುಸ್ಲಿಂ ಜಗತ್ತು ಮತ್ತು ಅಮೆರಿಕಕ್ಕೆ ಮಹತ್ವದ ದಿನವಾಗಿದೆ. ಈ ಐತಿಹಾಸಿಕ ಒಪ್ಪಂದ ಸಾಧ್ಯವಾಗಲು ಸಹಕರಿಸಿದ ಖತರ್, ಈಜಿಪ್ಟ್ ಮತ್ತು ಟರ್ಕಿಯ ಮಧ್ಯವರ್ತಿಗಳಿಗೆ ಕೃತಜ್ಞತೆಗಳು" ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News