ಗಾಝಾ ಮೇಲೆ ಇಸ್ರೇಲ್ನಿಂದ ವೈಮಾನಿಕ ದಾಳಿ: ಐವರು ಮೃತ್ಯು
ಸಾಂದರ್ಭಿಕ ಚಿತ್ರ | Photo Credit : PTI
ಗಾಝಾ: ಶನಿವಾರ ಬೆಳಿಗ್ಗೆ ಗಾಝಾ ನಗರದ ಅಪಾರ್ಟ್‍ಮೆಂಟ್ ಕಟ್ಟಡವೊಂದರ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಸೇರಿದಂತೆ ಕನಿಷ್ಠ ಐವರು ಫೆಲೆಸ್ತೀನಿಯನ್ನರು ಮೃತಪಟ್ಟಿದ್ದು, ಇತರ ಹಲವರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಮತ್ತು ನಾಗರಿಕ ರಕ್ಷಣಾ ಸೇವಾ ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಅವರ ಹೆಣ್ಣುಮಕ್ಕಳು ಸೇರಿದ್ದಾರೆ. ಎರಡು ಕ್ಷಿಪಣಿಗಳು ನೇರವಾಗಿ ಅಪ್ಪಳಿಸಿದ್ದರಿಂದ ಅಪಾರ್ಟ್‍ಮೆಂಟ್ ಕಟ್ಟಡ ಧ್ವಂಸಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.