ಗಾಝಾ | ಇಸ್ರೇಲ್ ದಾಳಿಗೆ ಮಗು ಸೇರಿ ಮೂವರು ಮೃತ್ಯು
Update: 2026-08-23 23:35 IST
Photo Credit : PTI
ಗಾಝಾ: ಮಧ್ಯ ಗಾಝಾ ಪಟ್ಟಿಯಲ್ಲಿ ರವಿವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಅಲ್-ಜವಾಯ್ದಾ ನಗರದಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ. ನುಸೇರತ್ ನಿರಾಶ್ರಿತರ ಶಿಬಿರದ ಮೇಲೆ ನಡೆದ ಮತ್ತೊಂದು ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.