×
Ad

ಜಾರ್ಜಿಯಾದ ಶಾಲೆಯಲ್ಲಿ ಗುಂಡಿನ ದಾಳಿ: 4 ಮಂದಿ ಸಾವು

Update: 2024-09-05 21:42 IST

ಸಾಂದರ್ಭಿಕ ಚಿತ್ರ

ಟಿಬಿಲಿಸಿ: ಜಾರ್ಜಿಯಾದ ಶಾಲೆಯೊಂದರಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಟ 4 ಮಂದಿ ಮೃತಪಟ್ಟಿದ್ದು ಇತರ 9 ಮಂದಿ ಗಾಯಗೊಂಡಿದ್ದಾರೆ ಎಂದು ಕಾನೂನು ಜಾರಿ ಅಧಿಕಾರಿಗಳು ಹೇಳಿದ್ದಾರೆ.

ಜಾರ್ಜಿಯಾದ ವಿಂಡರ್ ನಗರದಲ್ಲಿರುವ ಅಪಾಲಾಚಿ ಹೈಸ್ಕೂಲ್‍ನಲ್ಲಿ ಗುಂಡಿನ ದಾಳಿ ನಡೆದಿದೆ. ತರಗತಿಗಳು ನಡೆಯುತ್ತಿದ್ದಾಗ ಶಾಲೆಯ ಆವರಣದಲ್ಲಿ ಗುಂಡಿನ ಸದ್ದು ಕೇಳಿಸಿದೆ. ಶಿಕ್ಷಕರಾದ ರಿಚರ್ಡ್ ಆಸ್ಪಿನ್‍ವಾಲ್ ಮತ್ತು ಕ್ರಿಸ್ತಿನಾ ಐರಿಮಿ, 14 ವರ್ಷದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 9 ಮಂದಿ ಗಾಯಗೊಂಡಿದ್ದು ಗಾಯಾಳುಗಳಲ್ಲಿ ಕೆಲವರು ಗಾಭರಿಯಿಂದ ಓಡುವಾಗ ಬಿದ್ದು ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸಿಎನ್‍ಎನ್ ವರದಿ ಮಾಡಿದೆ. ದಾಳಿಗೆ ಸಂಬಂಧಿಸಿ ಶಾಲೆಯ ಹಳೆ ವಿದ್ಯಾರ್ಥಿ 14 ವರ್ಷದ ಕೋಲ್ಟ್ ಗ್ರೇ ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದ್ದು ಆತನ ಬಳಿಯಿದ್ದ ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News