ಸಾಂದರ್ಭಿಕ ಚಿತ್ರ | Photo Credit : magnific.com

ಕೊಚ್ಚಿ, ಅ. 11: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಜಾಗತಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಕೇರಳ ಮತ್ತು ಸೌದಿ ಅರೇಬಿಯಾ ಹಾಗೂ ಪಶ್ಚಿಮ ಏಷ್ಯಾದ ಇತರ ದೇಶಗಳ ನಡುವಿನ ಹಲವು ವಿಮಾನಗಳ ಸೇವೆಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.

ಕೊಚ್ಚಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಸಿಐಎಎಲ್) ತನ್ನ ಹೇಳಿಕೆಯಲ್ಲಿ, ಜಾಗತಿಕ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಕೆಲವು ವಿಮಾನಯಾನ ಸಂಸ್ಥೆಗಳು ಅಕ್ಟೋಬರ್ 11ರಿಂದ 13ರವರೆಗೆ ಕೊಚ್ಚಿ ಮತ್ತು ಸೌದಿ ಅರೇಬಿಯಾ ನಡುವಿನ ವಿಮಾನಯಾನ ಸೇವೆಗಳನ್ನು ರದ್ದುಗೊಳಿಸಿವೆ ಎಂದು ತಿಳಿಸಿದೆ.

ಕೊಚ್ಚಿಯಿಂದ ದೋಹಾ ಮತ್ತು ರಾಸ್ ಅಲ್ ಖೈಮಾಗೆ ಸಂಪರ್ಕ ಕಲ್ಪಿಸುವ ಕೆಲವು ವಿಮಾನಗಳ ಸೇವೆಗಳೂ ರದ್ದಾಗಿವೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor