×
Ad

ಔತಣಕೂಟಕ್ಕೆ ನುಗ್ಗಿ ಗುಂಡಿನ ದಾಳಿ ನಡೆಸಿದ ಬಂದೂಕುಧಾರಿಗಳು; 6 ಮಂದಿ ಮೃತ್ಯು, 26 ಮಂದಿಗೆ ಗಾಯ

Update: 2023-12-30 22:29 IST

ಮೆಕ್ಸಿಕೋ ಸಿಟಿ: ಉತ್ತರ ಮೆಕ್ಸಿಕೋದ ಸಿಯುಡಾಡ್ ಒಬ್ರೆಗಾನ್ ನಗರದಲ್ಲಿ ನಡೆಯುತ್ತಿದ್ದ ಔತಣಕೂಟಕ್ಕೆ ನುಗ್ಗಿದ ಮೂವರು ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 6 ಮಂದಿ ಮೃತಪಟ್ಟಿದ್ದು 5 ಮಕ್ಕಳ ಸಹಿತ ಇತರ 26 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಗಾಯಾಳುಗಳಲ್ಲಿ 4 ಮಂದಿಯ ಸ್ಥಿತಿ ಗಂಭೀರವಾಗಿದೆ. ನರಹತ್ಯೆ ಮತ್ತು ಇತರ ಆರೋಪಗಳಲ್ಲಿ ಬೇಕಾಗಿದ್ದ(ವಾಂಟೆಡ್) ವ್ಯಕ್ತಿಯನ್ನು ಗುರಿಯಾಗಿಸಿ ಶೂಟೌಟ್ ನಡೆದಿದೆ. ಗುಂಡಿನ ದಾಳಿ ಆರಂಭವಾಗುತ್ತಿದ್ದಂತೆಯೇ ಆತ ಪರಾರಿಯಾಗಲು ಯತ್ನಿಸಿದರೂ ಆತನನ್ನು ಬೆನ್ನಟ್ಟಿ ಹತ್ಯೆ ಮಾಡಲಾಗಿದೆದಾಳಿ ನಡೆಸಿದ ಗುಂಪಿನ 4ನೇ ಸದಸ್ಯನೂ ಔತಣಕೂಟದಲ್ಲಿ ಭಾಗವಹಿಸಿದ್ದ. ದಾಳಿಕೋರರು ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದು, ನಗರದಲ್ಲಿ ಮಾದಕವಸ್ತು ಮಾರಾಟ ಜಾಲದ ಗ್ಯಾಂಗ್ಗಳ ನಡುವೆ ಆಗಾಗ ಸಂಘರ್ಷ ನಡೆಯುತ್ತಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News