ಸಾಂದರ್ಭಿಕ ಚಿತ್ರ | Photo: magnific.com

ರಿಯಾದ್: ಸೌದಿ ಅರೇಬಿಯದ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಜಿದ್ದಾ ವಿಮಾನ ನಿಲ್ದಾಣದಲ್ಲಿ 156 ವಿಮಾನಗಳ ಹಾರಾಟ ರದ್ದಾಗಿದ್ದು, 347 ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ‘Flightradar24’ ವರದಿ ತಿಳಿಸಿದೆ.

ಜಿದ್ದಾ ವಿಮಾನ ನಿಲ್ದಾಣದಲ್ಲಿ ಒಟ್ಟು ವಿಮಾನಗಳ ಪೈಕಿ ಶೇ. 20ರಷ್ಟು ವಿಮಾನಗಳ ಹಾರಾಟ ರದ್ದಾಗಿದೆ. ಶೇ. 49ರಷ್ಟು ವಿಮಾನಗಳ ಸಂಚಾರ ವಿಳಂಬವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ರಿಯಾದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ ಎಂದು ವರದಿಯಾಗಿದೆ. ದಮ್ಮಾಮ್ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಳೆದ ಎರಡು ಗಂಟೆಗಳಲ್ಲಿ ಅಲ್ಲಿ ಯಾವುದೇ ವಿಮಾನಗಳ ಸಂಚಾರ ನಡೆದಿಲ್ಲ. ಕಳೆದ ನಾಲ್ಕು ಗಂಟೆಗಳಲ್ಲಿ ಕೇವಲ ಮೂರು ವಿಮಾನಗಳು ಮಾತ್ರ ಇಳಿದಿವೆ ಎಂದು ‘Flightradar24’ ಮಾಹಿತಿ ನೀಡಿದೆ.

ರವಿವಾರ ರಿಯಾದ್‌ನ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ 12ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ನಡೆದ ಮತ್ತೊಂದು ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ. ಇದೇ ದಿನ ದಮ್ಮಾಮ್ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor