×
Ad

ಪಾಕ್‌-ಅಫ್ಘಾನ್‌ ಸಂಘರ್ಷವನ್ನು ಸುಲಭವಾಗಿ ಬಗೆಹರಿಸುತ್ತೇನೆ : ಡೊನಾಲ್ಡ್ ಟ್ರಂಪ್

Update: 2025-10-18 12:52 IST

ಡೊನಾಲ್ಡ್‌ ಟ್ರಂಪ್‌ (Photo: PTI)

ವಾಷಿಂಗ್ಟನ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಸಂಘರ್ಷವನ್ನು ನಾನು ಸುಲಭವಾಗಿ ಬಗೆಹರಿಸಬಲ್ಲೆ ಎಂದು ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಡೆಯುತ್ತಿರುವ ಸಂಘರ್ಷದ ಕುರಿತು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಶುಕ್ರವಾರ ರಾತ್ರಿ ಅಫ್ಘಾನಿಸ್ತಾನದ ಅಧಿಕಾರಿಗಳು ಆರೋಪಿಸಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಗಡಿ ಬಿಕ್ಕಟ್ಟು ಉಲ್ಬಣಗೊಂಡಿರುವ ಬೆನ್ನಲ್ಲೆ ಟ್ರಂಪ್‌ ಅವರ ಈ ಹೇಳಿಕೆ ಹೊರ ಬಿದ್ದಿದೆ.  

ನಾನು ಎಂಟು ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಈ ಹಿಂದೆ ಡೊನಾಲ್ಡ್ ‍ಟ್ರಂಪ್ ಪ್ರತಿಪಾದಿಸಿದ್ದರು. ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನೂ ನಾನೇ ನಿಲ್ಲಿಸಿದ್ದೆ ಎಂದು ಅವರು ಪದೇ ಪದೇ ಪುನರುಚ್ಚರಿಸಿದ್ದರು. ಅವರ ಈ ಹೇಳಿಕೆಯನ್ನು ಭಾರತ ಅಲ್ಲಗಳೆದಿದ್ದರೂ, ಅದನ್ನು ಮತ್ತೊಮ್ಮೆ ಪುನರುಚ್ಚರಿಸಿದ ಟ್ರಂಪ್, ನಾನು ಹಲವಾರು ಯುದ್ಧಗಳನ್ನು ಬಗೆಹರಿಸಿದ್ದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ದೊರೆಯಲಿಲ್ಲ ಎಂದು ಹೇಳಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News