×
Ad

ವರ್ಷಗಳ ಕಾಲ ಭಾರತವು ಅಮೆರಿಕದಿಂದ ಪ್ರಯೋಜನ ಪಡೆದಿದೆ: ಟ್ರಂಪ್

"ನರೇಂದ್ರ ಮೋದಿ ನನ್ನ ಉತ್ತಮ ಸ್ನೇಹಿತ"

Update: 2026-06-05 22:38 IST

ಡೊನಾಲ್ಡ್ ಟ್ರಂಪ್ | Photo Credit : PTI 

ವಾಶಿಂಗ್ಟನ್: ಅಮೆರಿಕ ಮತ್ತು ಭಾರತವು ಶೀಘ್ರದಲ್ಲೇ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ವೇತಭವನದಲ್ಲಿ ವರದಿಗಾರರ ಜೊತೆ ಮಾತನಾಡಿದ ಟ್ರಂಪ್, "ನರೇಂದ್ರ ಮೋದಿ ನನ್ನ ಉತ್ತಮ ಸ್ನೇಹಿತ. ನಮ್ಮಿಬ್ಬರ ನಡುವಿನ ಸ್ನೇಹ ಸಂಬಂಧವು ಬಾಕಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ" ಎಂದು ಹೇಳಿದರು.

ವರ್ಷಗಳ ಕಾಲ ಭಾರತವು ಅಮೆರಿಕದಿಂದ ಪ್ರಯೋಜನ ಪಡೆದಿದೆ. ಅಮೆರಿಕದ ಸರಕುಗಳ ಮೇಲೆ ಅಧಿಕ ತೆರಿಗೆ ವಿಧಿಸಿದ್ದು ನಮಗೆ ಏನನ್ನೂ ನೀಡಿರಲಿಲ್ಲ. ಆದರೆ ಈಗ ಪರಿಸ್ಥಿತಿ ಬದಲಾಗಿದೆ, ನಾವು ಭಾರತದೊಂದಿಗೆ ವ್ಯಾಪಾರದಿಂದ ಸಾಕಷ್ಟು ಹಣವನ್ನು ಗಳಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿರುವುದಾಗಿ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News