Photo: AFP

ದಮ್ಮಾಮ್: ಸೌದಿ ಅರೇಬಿಯಾದ ದಮ್ಮಾಮ್‌ ನಲ್ಲಿರುವ ಕಿಂಗ್ ಫಹ್ದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬುಧವಾರ ಸಂಜೆ ನಡೆದ ದಾಳಿಯಲ್ಲಿ ಭಾರತೀಯ ನಿವಾಸಿಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಮಹಾ ಪ್ರಾಧಿಕಾರ ತಿಳಿಸಿದೆ ಎಂದು Aljazeera ವರದಿ ಮಾಡಿದೆ.

ಮೃತರಲ್ಲಿ ಓರ್ವ ಸೌದಿ ಪ್ರಜೆಯಾಗಿದ್ದು, ಮತ್ತೊಬ್ಬರು ಭಾರತೀಯ ನಿವಾಸಿ ಎಂದು ಪ್ರಾಧಿಕಾರ ತಿಳಿಸಿದೆ. ಗಾಯಗೊಂಡ ಎಂಟು ಮಂದಿಯಲ್ಲಿ ಸಣ್ಣಪುಟ್ಟ ಗಾಯಗಳಾಗಿರುವವರಿಂದ ಹಿಡಿದು ತೀವ್ರ ಸ್ವರೂಪದ ಗಾಯಗಳಿಗೆ ಒಳಗಾದವರೂ ಇದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅದು ಹೇಳಿದೆ.

ದಾಳಿಯಿಂದ ವಿಮಾನ ನಿಲ್ದಾಣದಲ್ಲಿ ಹಾನಿ ಸಂಭವಿಸಿದ್ದು, ಅದರ ಪ್ರಮಾಣವನ್ನು ನಿರ್ಧರಿಸುವ ಕಾರ್ಯ ನಡೆಯುತ್ತಿದೆ. ಭದ್ರತಾ ಪಡೆಗಳ ಸಹಕಾರದೊಂದಿಗೆ ಹಾನಿಯ ಮೌಲ್ಯಮಾಪನ ನಡೆಸಲಾಗುತ್ತಿದೆ ಎಂದು ಪ್ರಾಧಿಕಾರ ಎಕ್ಸ್‌ ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ದಾಳಿಯ ಬಳಿಕ ವಿಮಾನ ನಿಲ್ದಾಣದ ಕಾರ್ಯಾಚರಣೆಗಳು ಮತ್ತು ವಾಯು ಸಂಚಾರ ಸಹಜ ಸ್ಥಿತಿಗೆ ಮರಳಿವೆ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor