×
Ad

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ನಿಗೂಢ ಮೃತ್ಯು

Update: 2025-06-20 11:09 IST

ತಾನ್ಯಾ ತ್ಯಾಗಿ (Photo credit: X/X/@Ishutyagi91)

ಒಟ್ಟಾವಾ: ಕೆನಡಾದ ಕ್ಯಾಲ್ಗರಿ ವಿಶ್ವವಿದ್ಯಾನಿಲಯದಲ್ಲಿ ಭಾರತೀಯ ವಿದ್ಯಾರ್ಥಿನಿಯೋರ್ವರು ಮೃತಪಟ್ಟಿದ್ದಾರೆ ಎಂದು ವ್ಯಾಂಕೋವರ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ತಿಳಿಸಿದ್ದಾರೆ.

ತಾನ್ಯಾ ತ್ಯಾಗಿ ಮೃತ ಭಾರತೀಯ ವಿದ್ಯಾರ್ಥಿನಿ. ತಾನ್ಯಾ ತ್ಯಾಗಿ ಸಾವಿನ ಕಾರಣವನ್ನು ಕೆನಡಾ ಪೊಲೀಸರು ಬಹಿರಂಗಪಡಿಸಿಲ್ಲ.

"ಕ್ಯಾಲ್ಗರಿ ವಿಶ್ವವಿದ್ಯಾಲಯದ ಭಾರತೀಯ ವಿದ್ಯಾರ್ಥಿನಿ ತಾನ್ಯಾ ತ್ಯಾಗಿ ಅವರ ಹಠಾತ್ ನಿಧನದಿಂದ ನಾವು ದುಃಖಿತರಾಗಿದ್ದೇವೆ. ರಾಯಭಾರಿ ಕಚೇರಿಯು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ದುಃಖಿತ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ಒದಗಿಸುತ್ತದೆ. ಮೃತರ ಕುಟುಂಬಕ್ಕೆ ಸಂತಾಪಗಳು" ಎಂದು ಭಾರತೀಯ ರಾಯಭಾರಿ ಕಚೇರಿ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News