×
Ad

ಇಂಡೋನೇಶ್ಯಾ | ಶಾಲಾ ಕಟ್ಟಡ ಕುಸಿದು ಮೂವರು ಮಕ್ಕಳು ಮೃತ್ಯು : 100ಕ್ಕೂ ಹೆಚ್ಚು ಮಂದಿಗೆ ಗಾಯ

Update: 2025-09-30 23:11 IST

PC | x.com/TrueCrimeUpdat

ಜಕಾರ್ತ, ಸೆ.30: ಇಂಡೋನೇಶ್ಯಾದ ಪೂರ್ವ ಜಾವಾ ಪ್ರಾಂತದಲ್ಲಿ ಶಾಲೆಯ ಕಟ್ಟಡವೊಂದು ಕುಸಿದು ಬಿದ್ದು ಕನಿಷ್ಠ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 100ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಮಾಧ್ಯಮಗಳು ಮಂಗಳವಾರ ವರದಿ ಮಾಡಿವೆ.

ಪೂರ್ವ ಜಾವಾದ ಸಿಡೋರ್ಜೊ ಪಟ್ಟಣದ ಅಲ್ ಖೋಜಿನಿ ಇಸ್ಲಾಮಿಕ್ ಬೋರ್ಡಿಂಗ್ ಶಾಲೆಯಲ್ಲಿ ಪ್ರಾರ್ಥನೆಗೆ ವಿದ್ಯಾರ್ಥಿಗಳು ಸಿದ್ಧತೆ ನಡೆಸುತ್ತಿದ್ದಾಗ ಕಟ್ಟಡ ಕುಸಿದು ಬಿದ್ದಿದೆ. ಎರಡು ಅಂತಸ್ತಿನ ಕಟ್ಟಡದ ಮೇಲ್ಭಾಗದಲ್ಲಿ ಮತ್ತೆ ಎರಡು ಅಂತಸ್ತುಗಳನ್ನು ನಿರ್ಮಿಸಲಾಗುತ್ತಿತ್ತು. ಕಟ್ಟಡದ ಅಡಿಪಾಯ ದುರ್ಬಲಗೊಂಡಿದ್ದು ದುರಂತಕ್ಕೆ ಕಾರಣವೆಂದು ವಿಪತ್ತು ನಿರ್ವಹಣಾ ಇಲಾಖೆಯ ಮೂಲಗಳು ಹೇಳಿವೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕುಸಿದು ಬಿದ್ದಿರುವ ಕಟ್ಟಡದ ಅವಶೇಷಗಳಡಿ ಕನಿಷ್ಠ 38 ವಿದ್ಯಾರ್ಥಿಗಳು ಸಿಲುಕಿರುವ ಸಾಧ್ಯತೆ ಇದ್ದು, ಸಾವು- ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News