ನಾಗರಿಕ ಪರಮಾಣು ಕಾರ್ಯಕ್ರಮ ಅಭಿವೃದ್ಧಿಪಡಿಸಲು ಇರಾನಿಗೆ ಹಕ್ಕಿದೆ: ಪುಟಿನ್
Update: 2025-06-21 21:01 IST
ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ | PC : PTI
ಮಾಸ್ಕೋ: ನಾಗರಿಕ ಉದ್ದೇಶಗಳಿಗಾಗಿ ಪರಮಾಣು ತಂತ್ರಜ್ಞಾನ ಅಭಿವೃದ್ಧಿಪಡಿಸುವ ಇರಾನಿನ ಹಕ್ಕನ್ನು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಲವಾಗಿ ಸಮರ್ಥಿಸಿಕೊಂಡಿದ್ದು ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಬಯಸುತ್ತದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ.
ಇರಾನಿನ ನಾಗರಿಕ ಪರಮಾಣು ಇಂಧನ ಅಭಿವೃದ್ಧಿ ಕಾರ್ಯಕ್ರಮದಲ್ಲಿ ನೆರವಾಗಲು, ಅಗತ್ಯದ ನೆರವು ಒದಗಿಸಲು ರಶ್ಯ ಸಿದ್ಧವಿದೆ. ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸಲು ತಾನು ಬಯಸಿಲ್ಲ ಎಂದು ಇರಾನ್ ಪದೇ ಪದೇ ಹೇಳಿದೆ. ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ಅಂತರಾಷ್ಟ್ರೀಯ ಪರಮಾಣು ಸಂಸ್ಥೆ(ಐಎಇಎ) ಕೂಡಾ ಹೇಳಿದೆ ಎಂದು ಪುಟಿನ್ ಹೇಳಿದ್ದಾರೆ.