×
Ad

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ | ಅಮೆರಿಕದ ದಾಳಿಗೆ ಪ್ರತಿಯಾಗಿ ಬಹರೈನ್‌, ಕುವೈತ್‌ ಮೇಲೆ ಇರಾನ್‌ ನಿಂದ ದಾಳಿ

ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ತಿಳಿಸಿದ IRGC

Update: 2026-07-08 12:07 IST

ಸಾಂದರ್ಭಿಕ ಚಿತ್ರ (X/@RT_India_news)

ಕುವೈತ್‌ : ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ ಉಲ್ಬಣಗೊಂಡಿದೆ. ಅಮೆರಿಕದ ವಾಯು ದಾಳಿಗೆ ಪ್ರತಿಯಾಗಿ ಬಹರೈನ್‌, ಕುವೈತ್‌ ನಲ್ಲಿ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್‌ನ ಐಆರ್‌ಜಿಸಿ ತಿಳಿಸಿದೆ ಎಂದು reuters.com ವರದಿ ಮಾಡಿದೆ.

ಬಹ್ರೇನ್ ಮತ್ತು ಕುವೈತ್‌ನಲ್ಲಿ ದಾಳಿ ಕುರಿತು ಸೈರನ್‌ಗಳು ಮೊಳಗಿದೆ.

"ಬಂದರ್ ಸಲ್ಮಾನ್ ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆ, ಬಹರೈನ್‌ನ ಅಮೆರಿಕದ ಐದನೇ ನೌಕಾಪಡೆ ನೆಲೆ ಹಾಗೂ ಕುವೈತ್‌ನ ಅಲಿ ಅಲ್ ಸಲೇಮ್ ವಾಯುನೆಲೆಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್‌ ದಾಳಿ ನಡೆಸಿರುವುದಾಗಿ ಐಆರ್‌ಜಿಸಿ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ, ಈ ಕಾರ್ಯಾಚರಣೆಗೆ ಅಡ್ಡಿಪಡಿಸಲು ಯತ್ನಿಸುತ್ತಿದ್ದ ಅಮೆರಿಕದ MQ-9 ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಹೇಳಿದೆ.

ಹಾರ್ಮುಝ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗೆ ಪ್ರತಿಯಾಗಿ ಅಮೆರಿಕ ಮಿಲಿಟರಿ ದಕ್ಷಿಣ ಇರಾನ್‌ನ ಹಲವು ಪ್ರದೇಶಗಳ ಮೇಲೆ ವಾಯುದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ 'ತಕ್ಕ ಉತ್ತರ' ನೀಡುವುದಾಗಿ ಇರಾನ್ ಎಚ್ಚರಿಕೆ ನೀಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News