×
Ad

ಇರಾನ್ ಯುದ್ಧಕ್ಕೆ ಸಂಬಂಧಿಸಿದಂತೆ ಟ್ರಂಪ್ ಚೀನಾದ ಸಹಾಯ ಕೇಳಿಲ್ಲ: ಮೆರಿಕದ ವಿದೇಶಾಂಗ ಕಾರ್ಯದರ್ಶಿ ರೂಬಿಯೊ

Update: 2026-05-15 20:18 IST

ಮಾರ್ಕೊ ರೂಬಿಯೊ | Photo Credit : AP 

ಬೀಜಿಂಗ್: ನಡೆಯುತ್ತಿರುವ ಇರಾನ್ ಯುದ್ಧಕ್ಕೆ ಸಂಬಂಧಿಸಿದಂತೆ ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಅವರ ಸಹಾಯವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೇಳಿಲ್ಲ. ಅಮೆರಿಕಕ್ಕೆ ಅದರ ಅಗತ್ಯವೂ ಇಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ಹೇಳಿದ್ದಾರೆ.

ಇರಾನ್‍ನೊಂದಿಗೆ ಒಪ್ಪಂದ ಮಾಡಿಕೊಳ್ಳಲು ಅಮೆರಿಕ ಹೊಂದಾಣಿಕೆಗೆ ಸಿದ್ಧವಾಗಿದೆ ಮತ್ತು ಇರಾನ್ ಪರಮಾಣು ಶಸ್ತ್ರಾಸ್ತ್ರ ಹೊಂದಲು ಅವಕಾಶ ನೀಡಲಿದೆ. ಜೊತೆಗೆ ಹಾರ್ಮುಝ್ ಜಲಸಂಧಿಯನ್ನು ಶಾಶ್ವತವಾಗಿ ನಿಯಂತ್ರಿಸುತ್ತೇವೆ ಎಂದು ಇರಾನಿಯನ್ನರು ಭಾವಿಸಿದರೆ ತಪ್ಪಾಗುತ್ತದೆ. ಯಾವುದೇ ಸಂದರ್ಭದಲ್ಲೂ ನಾವು ಇರಾನ್‍ನೊಂದಿಗೆ ಕೆಟ್ಟ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ರೂಬಿಯೊ ಹೇಳಿರುವುದಾಗಿ ವರದಿಯಾಗಿದೆ.

ಈ ಮಧ್ಯೆ, ಯುದ್ಧದ ಸಂದರ್ಭದಲ್ಲಿ ಇರಾನ್‍ಗೆ ಮಿಲಿಟರಿ ನೆರವು ನೀಡುವ ಯೋಜನೆಯನ್ನು ಪ್ರಸ್ತುತ ತಮ್ಮ ದೇಶ ಹೊಂದಿಲ್ಲ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ ಭರವಸೆ ನೀಡಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಶುಕ್ರವಾರ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News