Photo: aa.com

ಟೆಹ್ರಾನ್: ಕುವೈತ್‌ ನಲ್ಲಿರುವ ಅಲಿ ಅಲ್-ಸಲೇಮ್ ವಾಯುನೆಲೆಯ ಮೇಲೆ ಇರಾನ್ ಸೇನೆ ಡ್ರೋನ್ ದಾಳಿ ನಡೆಸಿದೆ ಎಂದು ಇರಾನ್‌ ನ ಅಧಿಕೃತ ಸುದ್ದಿ ಸಂಸ್ಥೆ IRNA ವರದಿ ಮಾಡಿದೆ.

ಈ ವಾಯುನೆಲೆಯಲ್ಲಿರುವ ಅಮೆರಿಕದ ಡ್ರೋನ್‌ ಗಳು ಮತ್ತು ಕ್ಷಿಪಣಿ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಇರಾನ್ ಸೇನೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಕುವೈತ್ ಸೇನೆಯು ತನ್ನ ವಾಯು ರಕ್ಷಣಾ ವ್ಯವಸ್ಥೆಗಳು ಶತ್ರು ಡ್ರೋನ್ ದಾಳಿಗಳನ್ನು ಎದುರಿಸುತ್ತಿವೆ ಎಂದು ಹೇಳಿತ್ತು. ಆದರೆ, ಈ ಕುರಿತು ಹೆಚ್ಚಿನ ವಿವರಗಳನ್ನು ನೀಡಿರಲಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Contributor - ಇರ್ಷಾದ್ ಎಂ. ವೇಣೂರು

contributor