ಅಮೆರಿಕದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧ: ಇರಾನ್ ಅಧ್ಯಕ್ಷ ಪೆಜೆಶ್ಕಿಯನ್
Update: 2025-06-24 22:56 IST
Photo: Reuters
ಟೆಹರಾನ್: ಅಂತರರಾಷ್ಟ್ರೀಯ ಚೌಕಟ್ಟುಗಳ ಆಧಾರದ ಮೇಲೆ ಅಮೆರಿಕದೊಂದಿಗಿನ ಸಮಸ್ಯೆಗಳನ್ನು ಪರಿಹರಿಸಲು ಇರಾನ್ ಸಿದ್ಧವಾಗಿದೆ ಎಂದು ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ ಒಂದು ದಿನದ ನಂತರ ಈ ಹೇಳಿಕೆ ಹೊರಬಿದ್ದಿದೆ.
ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗಿನ ದೂರವಾಣಿ ಕರೆಯಲ್ಲಿ ಇರಾನ್ ಅಧ್ಯಕ್ಷ ಪೆಜೆಶ್ಕಿಯನ್ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಇರಾನ್‌ನ ಅಧಿಕೃತ ಸುದ್ದಿ ಸಂಸ್ಥೆ ಐಆರ್‌ಎನ್‌ಎ ಉಲ್ಲೇಖಿಸಿ Aljazeera ವರದಿ ಮಾಡಿದೆ.