×
Ad

ಇರಾಕ್ | ವಿದ್ಯಾರ್ಥಿಗಳ ಗುಂಪಿನ ಮೇಲೆ ನುಗ್ಗಿದ ಟ್ರಕ್; 6 ಮಂದಿ ಮೃತ್ಯು

Update: 2024-04-03 21:16 IST

ಬಗ್ದಾದ್ : ಇರಾಕ್‍ನ ದಕ್ಷಿಣದಲ್ಲಿರುವ ಬಾಸ್ರ ಪ್ರಾಂತದಲ್ಲಿ ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಟ್ರಕ್ ಹರಿದು ಕನಿಷ್ಟ 6 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇತರ 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಲ್-ಹರ್ತ ಪ್ರದೇಶದಲ್ಲಿ ದುರಂತ ಸಂಭವಿಸಿದೆ. ಟ್ರಕ್‍ನ ಬ್ರೇಕ್ ವಿಫಲವಾದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು ಅಪಘಾತಕ್ಕೆ ಕಾರಣ. ಚಾಲಕನನ್ನು ಬಂಧಿಸಲಾಗಿದೆ. ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದ 6 ವಿದ್ಯಾರ್ಥಿಗಳು ಮೃತಪಟ್ಟಿದ್ದು ಗಾಯಗೊಂಡ 14 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಮಿಕ್ದಾದ್ ಮಿರಿ ಹೇಳಿದ್ದಾರೆ. ಗಾಯಗೊಂಡವರಲ್ಲಿ ಕೆಲವರಿಗೆ ತಲೆಗೆ ಗಂಭೀರ ಗಾಯವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ. ತಕ್ಷಣ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಇರಾಕ್ ಪ್ರಧಾನಿ ಮುಹಮ್ಮದ್ ಶಿಯಾ ಅಲ್-ಸುಡಾನಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News