×
Ad

ಇಸ್ಲಾಮಾಬಾದ್ ವಿಮಾನ ನಿಲ್ದಾಣ ಒಪ್ಪಂದದಿಂದ ನಿರ್ಗಮಿಸಿದ UAE

Update: 2026-01-26 21:26 IST

 ಇಸ್ಲಾಮಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ | Photo Credit : NDTV 

ಅಬುಧಾಬಿ, ಜ.26: ಇಸ್ಲಾಮಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಯೋಜನೆಯಿಂದ ಯುಎಇ ಸೋಮವಾರ ಹಿಂದಕ್ಕೆ ಸರಿದಿದ್ದು, ಪಾಕಿಸ್ತಾನಕ್ಕೆ ಅನಿರೀಕ್ಷಿತ ಹಿನ್ನಡೆಯಾಗಿದೆ.

ಯುಎಇ ಅಧ್ಯಕ್ಷ ಶೇಖ್ ಮುಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ಅನಿರೀಕ್ಷಿತ ಭೇಟಿ ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಸ್ಥಳೀಯ ಪಾಲುದಾರರನ್ನು ಹುಡುಕಲು ಯುಎಇ ವಿಫಲವಾದ ನಂತರ ಮತ್ತು ಯೋಜನೆಯಲ್ಲಿ ಆಸಕ್ತಿ ಕಳೆದುಕೊಂಡ ಹಿನ್ನೆಲೆಯಲ್ಲಿ ಆಗಸ್ಟ್ 2025ರಿಂದ ಚರ್ಚೆಯಲ್ಲಿರುವ ಪ್ರಸ್ತಾವನೆಯು ವಿಫಲವಾಯಿತು. ಈ ನಿರ್ಧಾರವು ರಾಜಕೀಯ ಪರಿಗಣನೆಗಳಿಗೆ ನೇರವಾಗಿ ಸಂಬಂಧಿಸಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ. ಪಾಕಿಸ್ತಾನದ ಹದಗೆಡುತ್ತಿರುವ ಆರ್ಥಿಕ ಪರಿಸ್ಥಿತಿಯ ನಡುವೆ ಈ ಯೋಜನೆಯು ಪ್ರಾಮುಖ್ಯತೆಯನ್ನು ಪಡೆದುಕೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News