ಇಸ್ರೇಲ್ ಗುಪ್ತಚರ ಮುಖ್ಯಸ್ಥರನ್ನು ವಜಾಗೊಳಿಸಿದ ಸರಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ
Update: 2025-03-21 22:48 IST
PC | AFP
ಟೆಲ್‍ಅವೀವ್: ಇಸ್ರೇಲ್ ನ ಆಂತರಿಕ ಗುಪ್ತಚರ ಏಜೆನ್ಸಿ ಮುಖ್ಯಸ್ಥ ರೊನೆನ್ ಬಾರ್ ಅವರನ್ನು ವಜಾಗೊಳಿಸುವ ಸರಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ವಿಧಿಸಿದ್ದು ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ತೀವ್ರ ಹಿನ್ನಡೆಯಾಗಿದೆ.
ಆಂತರಿಕ ಗುಪ್ತಚರ ಏಜೆನ್ಸಿ ಮುಖ್ಯಸ್ಥರನ್ನು ವಜಾಗೊಳಿಸುವ ಸರಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಮುಗಿಯುವವರೆಗೆ ಸರಕಾರದ ಆದೇಶಕ್ಕೆ ತಡೆ ನೀಡಲಾಗಿದೆ ಎಂದು ಸುಪ್ರೀಂಕೋರ್ಟ್‍ನ ಆದೇಶವನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ಶುಕ್ರವಾರ ವರದಿ ಮಾಡಿದೆ. ಆಂತರಿಕ ಗುಪ್ತಚರ ಏಜೆನ್ಸಿ ಮುಖ್ಯಸ್ಥರನ್ನು ವಜಾಗೊಳಿಸುವ ಆದೇಶವನ್ನು ಪ್ರಶ್ನಿಸಿ ವಿಪಕ್ಷ ಮುಖಂಡ ಯಾಹಿರ್ ಲಾಪಿಡ್ ಅವರ ಪಕ್ಷ ಹಾಗೂ ಸರ್ಕಾರೇತರ ಸಂಸ್ಥೆಗಳು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದವು.