×
Ad

ಗಾಝಾ: ಇಸ್ರೇಲ್ ದಾಳಿಯಲ್ಲಿ ಕನಿಷ್ಠ 33 ಮಂದಿ ಮೃತ್ಯು

Update: 2025-07-06 20:28 IST

Photo Credit: AP

ಗಾಝಾ: ಗಾಝಾದ್ಯಂತ ಶನಿವಾರ ತಡರಾತ್ರಿಯಿಂದ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 33 ಫೆಲೆಸ್ತೀನೀಯರು ಸಾವನ್ನಪ್ಪಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ರವಿವಾರ ಮಾಹಿತಿ ನೀಡಿದೆ.

ಗಾಝಾ ನಗರದಲ್ಲಿ ಎರಡು ಮನೆಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 20 ಮಂದಿ ಮೃತಪಟ್ಟಿದ್ದು ಇತರ 25 ಮಂದಿ ಗಾಯಗೊಂಡಿರುವುದಾಗಿ ಗಾಝಾದ ಶಿಫಾ ಆಸ್ಪತ್ರೆಯ ಮೂಲಗಳು ಹೇಳಿವೆ. ದಕ್ಷಿಣ ಗಾಝಾದ ಮುವಾಸಿ ಪ್ರದೇಶದಲ್ಲಿ ಸ್ಥಳಾಂತರಿತ ಫೆಲೆಸ್ತೀನೀಯರು ಆಶ್ರಯ ಪಡೆದಿದ್ದ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಒಂದೇ ಕುಟುಂಬದ ಐವರ ಸಹಿತ 13 ಫೆಲೆಸ್ತೀನೀಯರು ಸಾವನ್ನಪ್ಪಿದ್ದು ಇತರ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ. ರವಿವಾರ ಬೆಳಗ್ಗಿನವರೆಗಿನ 24 ಗಂಟೆಯ ಅವಧಿಯಲ್ಲಿ ಗಾಝಾದಲ್ಲಿ ಹಮಾಸ್ ನ 130 ಗುರಿಗಳ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ಮಿಲಿಟರಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News