ಇರಾನ್ ದಾಳಿಯಲ್ಲಿ ಕಳೆದ 24 ಗಂಟೆಗಳಲ್ಲಿ 191 ಜನರು ಗಾಯಗೊಂಡಿದ್ದಾರೆ : ಇಸ್ರೇಲ್
Update: 2026-03-10 13:55 IST
File Photo: PTI
ಟೆಲ್ ಅವೀವ್ : ಇಸ್ರೇಲ್ ನಲ್ಲಿ ಇರಾನ್ ದಾಳಿಗೆ ಕಳೆದ 24 ಗಂಟೆಗಳಲ್ಲಿ 191 ಜನರು ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಹೇಳಿದೆ.
ದಿ ಟೈಮ್ಸ್ ಆಫ್ ಇಸ್ರೇಲ್ ಪ್ರಕಾರ, ಯುದ್ಧದಿಂದಾಗಿ ಕಳೆದ 24 ಗಂಟೆಗಳಲ್ಲಿ 191 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾದವರಲ್ಲಿ ಸೈನಿಕರು ಮತ್ತು ನಾಗರಿಕರು ಸೇರಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಇಸ್ರೇಲ್ ಆರೋಗ್ಯ ಸಚಿವಾಲಯ ಹೇಳಿದೆ.
ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್‌ನಲ್ಲಿ 2,339 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 95 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.
ಸೋಮವಾರ ಕೇಂದ್ರ ನಗರವಾದ ಯೆಹೂದ್ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದರು.