ಟ್ರಂಪ್ ಕೋರಿಕೆಯ ಮೇರೆಗೆ ಇರಾನ್ ಮೇಲಿನ ದಾಳಿ ನಿಲ್ಲಿಸಿದ ಇಸ್ರೇಲ್: ವರದಿ
Update: 2026-06-08 19:37 IST
Photo: x.com/TimesofIsrael
ಟೆಲ್ ಅವೀವ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋರಿಕೆಯ ಮೇರೆಗೆ ಇಸ್ರೇಲ್, ಇರಾನ್ ಮೇಲಿನ ದಾಳಿಗಳನ್ನು ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.
ಇಸ್ರೇಲ್ ನ ಹಿರಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಚಾನೆಲ್ 12 ಈ ಮಾಹಿತಿ ನೀಡಿದೆ. ಟ್ರಂಪ್ ಅವರ ಮನವಿಯ ಹಿನ್ನೆಲೆಯಲ್ಲಿ ಇಸ್ರೇಲ್ ದಾಳಿಗಳನ್ನು ನಿಲ್ಲಿಸಿದೆ ಎಂದು ಆ ಅಧಿಕಾರಿ ತಿಳಿಸಿದ್ದಾರೆ.
ಇದೇ ವೇಳೆ, ಹಿಜ್ಬುಲ್ಲಾ ಸಂಘಟನೆ ಇಸ್ರೇಲ್ ನ ಪಟ್ಟಣಗಳ ಮೇಲೆ ದಾಳಿಯನ್ನು ಮುಂದುವರಿಸಿದರೆ, ಲೆಬನಾನ್ ರಾಜಧಾನಿ ಬೈರುತ್‌ನ ದಕ್ಷಿಣ ಉಪನಗರಗಳ ಮೇಲೆ ಇಸ್ರೇಲ್ ದಾಳಿ ನಡೆಸಲಿದೆ ಎಂದು ಹೆಸರನ್ನು ಬಹಿರಂಗಪಡಿಸದ ಆ ಅಧಿಕಾರಿ ಎಚ್ಚರಿಕೆ ನೀಡಿದ್ದಾರೆ ಎಂದು Aljazeera ವರದಿ ಮಾಡಿದೆ.
ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಧ್ಯಕ್ಷ ಟ್ರಂಪ್ ದೂರವಾಣಿ ಕರೆ ಮಾಡಿದ ಬಳಿಕ, ಇರಾನ್ ಮೇಲಿನ ದಾಳಿಗಳನ್ನು ಇಸ್ರೇಲ್ ನಿಲ್ಲಿಸಲು ಒಪ್ಪಿಕೊಂಡಿದೆ ಎಂದು ತಿಳಿದು ಬಂದಿದೆ.