×
Ad

ಗಾಝಾ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 43 ಮಂದಿ ಮೃತ್ಯು

Update: 2025-09-25 23:01 IST

PC : AP

ಗಾಝಾ, ಸೆ.25: ದಕ್ಷಿಣ ಗಾಝಾ ಮತ್ತು ಮಧ್ಯ ಗಾಝಾದಲ್ಲಿ ಗುರುವಾರ ಬೆಳಗ್ಗಿನಿಂದ ಇಸ್ರೇಲ್ ಮಿಲಿಟರಿ ನಡೆಸಿದ ದಾಳಿಯಲ್ಲಿ ಕನಿಷ್ಠ 43 ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

ಗಾಝಾ ಪಟ್ಟಿಯ ಅಲ್-ಝವೈದಾ ನಗರದಲ್ಲಿ ಸ್ಥಳಾಂತರಗೊಂಡವರು ನೆಲೆಸಿದ್ದ ಡೇರೆ ಮತ್ತು ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ 8 ಮಕ್ಕಳು ಸೇರಿದಂತೆ 12 ಮಂದಿ ಮೃತಪಟ್ಟಿದ್ದು ಮನೆ ಧ್ವಂಸಗೊಂಡಿದೆ. ಡೀರ್ ಅಲ್-ಬಲಾ ನಗರದಲ್ಲಿ ಡೇರೆಯೊಂದರ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಬಾಲಕಿ ಮೃತಪಟ್ಟಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ. ಖಾನ್ ಯೂನಿಸ್ ನಗರದಲ್ಲಿ ಅಪಾರ್ಟ್ಮೆಂಟ್ ಕಟ್ಟಡವೊಂದರ ಮೇಲೆ ನಡೆದ ದಾಳಿಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News