×
Ad

ಇಸ್ರೇಲ್ ದಾಳಿಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿರುವುದನ್ನು ದೃಢಪಡಿಸಿದ ಇರಾನ್

Update: 2024-10-26 17:22 IST

PC : NDTV 

ಇರಾನ್: ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆಂದು ಇರಾನ್ ಸೇನೆ ಹೇಳಿದೆ.

ಇರಾನ್ ನ ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ ಇಬ್ಬರು ಇರಾನ್ ಸೈನಿಕರು ಮೃತಪಟ್ಟಿದ್ದಾರೆಂದು ಇರಾನ್ ತಿಳಿಸಿರುವ ಬಗ್ಗೆ ರಾಯಿಟರ್ಸ್ ಕೂಡ ವರದಿ ಮಾಡಿದೆ.

ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ ಸೇನೆಯು ಮುಂಜಾನೆ ಇಸ್ರೇಲ್ ನಡೆಸಿದ ದಾಳಿಗೆ ತನ್ನ ಇಬ್ಬರು ಹೋರಾಟಗಾರರನ್ನು ಕಳೆದುಕೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ.

ಇಸ್ರೇಲ್ ಸೇನೆಯು ಇರಾನ್ ನಲ್ಲಿನ ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಶನಿವಾರ ಮುಂಜಾನೆ ದಾಳಿಗಳನ್ನು ನಡೆಸಿತ್ತು. ಇಸ್ರೇಲ್ ದಾಳಿಗಳು ಇಲಾಮ್, ಖುಜೆಸ್ತಾನ್ ಮತ್ತು ಟೆಹ್ರಾನ್ ಪ್ರಾಂತ್ಯಗಳಲ್ಲಿನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ನಡೆದಿದೆ ಎಂದು ಇರಾನ್ ನ ಮಿಲಿಟರಿ ದೃಢಪಡಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News