×
Ad

ಜಬಾಲಾ ಶಿಬಿರದ ಮೇಲೆ ಇಸ್ರೇಲ್ ದಾಳಿ: 90 ಮಂದಿ ಮೃತ್ಯು

Update: 2023-12-18 23:53 IST

Photo- PTI

ಗಾಝಾ: ಉತ್ತರ ಗಾಝಾದ ಜಬಾಲ ನಿರಾಶ್ರಿತರ ಶಿಬಿರದ ಮೇಲೆ ರವಿವಾರ ಇಸ್ರೇಲ್ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 90 ಫೆಲೆಸ್ತೀನೀಯರು ಮೃತಪಟ್ಟಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ಹೇಳಿದೆ.

ಜಬಾಲಾದ ಎರಡು ಜನವಸತಿ ಕಟ್ಟಡವನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಹಲವಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ವರದಿ ಮಾಡಿದೆ.

ಈ ಮಧ್ಯೆ, ಪಶ್ಚಿಮದಂಡೆಯ ಟ್ಯುಬಾಸ್ ಬಳಿಯ ಅಲ್-ಫರಾ ನಿರಾಶ್ರಿತರ ಶಿಬಿರದ ಮೇಲೆ ಸೋಮವಾರ ಇಸ್ರೇಲ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ 4 ಫೆಲೆಸ್ತೀನೀಯರು ಹತರಾಗಿದ್ದಾರೆ . ಇದರೊಂದಿಗೆ ಅಕ್ಟೋಬರ್ 7ರ ಬಳಿಕ ಆಕ್ರಮಿತ ಪಶ್ಚಿಮದಂಡೆಯ ಮೇಲಿನ ಇಸ್ರೇಲ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 300ರ ಗಡಿ ದಾಟಿದೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News