×
Ad

ಗಾಝಾ: ಇಸ್ರೇಲ್ ದಾಳಿಯಲ್ಲಿ 25 ಮಂದಿ ಮೃತ್ಯು

Update: 2025-04-20 20:47 IST

PC : aljazeera.com

ಗಾಝಾ: ಗಾಝಾ ಪಟ್ಟಿಯಾದ್ಯಂತ ಶನಿವಾರ ರಾತ್ರಿಯಿಂದ ರವಿವಾರ ಬೆಳಗ್ಗಿನವರೆಗೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 25 ಮಂದಿ ಸಾವನ್ನಪ್ಪಿರುವುದಾಗಿ ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ರವಿವಾರ ಹೇಳಿದೆ.

ಗಾಝಾ ಪಟ್ಟಿಯಲ್ಲಿ ಶನಿವಾರ ತಡರಾತ್ರಿ ಇಸ್ರೇಲ್ನ ದಾಳಿಯಲ್ಲಿ ಮಹಿಳೆಯರು , ಮಕ್ಕಳ ಸಹಿತ 20 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ರಫಾದಲ್ಲಿ ರವಿವಾರ ಬೆಳಿಗ್ಗೆ ನಡೆದ ಪ್ರತ್ಯೇಕ ಡ್ರೋನ್ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಈ ಮಧ್ಯೆ, ಗಾಝಾದಲ್ಲಿ ಯುದ್ಧ ಕೊನೆಗೊಳಿಸಿ ಪಡೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂಬ ಹಮಾಸ್ನ ಆಗ್ರಹವನ್ನು ತಿರಸ್ಕರಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಯುದ್ಧ ಮುಂದುವರಿಯಲಿದೆ ಮತ್ತು ಗಾಝಾದಲ್ಲಿ ಸೆರೆಯಲ್ಲಿರುವ ಒತ್ತೆಯಾಳುಗಳನ್ನು ಸ್ವದೇಶಕ್ಕೆ ಕರೆತರುವುದಾಗಿ ಘೋಷಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News