ಸಾಂದರ್ಭಿಕ ಚಿತ್ರ - Photo Credit : AP

ಬೈರುತ್: ದಕ್ಷಿಣ ಮತ್ತು ಪೂರ್ವ ಲೆಬನಾನ್‍ನಲ್ಲಿ ಶುಕ್ರವಾರ ತಡರಾತ್ರಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ ಮೂರು ಜನರು ಮೃತಪಟ್ಟಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.

ದಕ್ಷಿಣದ ಟೈರ್, ನಬಾಟಿಯ ಪ್ರದೇಶಗಳು ಹಾಗೂ ಪೂರ್ವದ ಬೆಕಾ ಪ್ರದೇಶ ಸೇರಿದಂತೆ ಒಟ್ಟು ಐದು ಸ್ಥಳಗಳ ಮೇಲೆ ಈ ದಾಳಿಗಳು ನಡೆದಿವೆ. ನಬಾಟಿಯ ನಗರದಲ್ಲಿ ಮೋಟಾರ್ ಸೈಕಲ್‍ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಟೈರ್ ಪ್ರದೇಶದ ರಮಾದಿಯೆಹ್ ಗ್ರಾಮದ ಮೇಲಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇಬ್ಬರು ಮಕ್ಕಳು, ಮೂವರು ಮಹಿಳೆಯರು ಮತ್ತು ಆರು ಜನ ರಕ್ಷಣಾ ಸಿಬ್ಬಂದಿ ಸೇರಿದಂತೆ 15 ಜನರು ಗಾಯಗೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಇಸ್ರೇಲ್ ಸೇನೆಯು ತಾವು ವಶಪಡಿಸಿಕೊಂಡಿದ್ದೇವೆ ಎಂದು ಹೇಳಿಕೊಂಡಿರುವ ಆಲಿ ಅಲ್-ತಾಹೇರ್ ಎಂಬ ಆಯಕಟ್ಟಿನ ಬೆಟ್ಟದ ಸಾಲಿನ ಬಳಿ ನಡೆದ ದಾಳಿಯಲ್ಲಿ ಕನಿಷ್ಠ 8 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor