×
Ad

ಜೈಶಂಕರ್- ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೊ ಮಾತುಕತೆ

Update: 2025-10-27 22:23 IST

 ಮಾರ್ಕೋ ರೂಬಿಯೊ , ಎಸ್. ಜೈಶಂಕರ್ | Photo Credit : ANI

ಕೌಲಲಾಂಪುರ, ಅ.27: ಮಲೇಶ್ಯಾದಲ್ಲಿ ನಡೆಯುತ್ತಿರುವ 47ನೇ ಆಸಿಯಾನ್ ಶೃಂಗಸಭೆಯ ನೇಪಥ್ಯದಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೊರನ್ನು ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ವರದಿಯಾಗಿದೆ.

`ವಿದೇಶಾಂಗ ಕಾರ್ಯದರ್ಶಿ ರೂಬಿಯೊರನ್ನು ಭೇಟಿಯಾಗಿ ದ್ವಿಪಕ್ಷೀಯ ಬಾಂಧವ್ಯ ಮತ್ತು ಪ್ರಾದೇಶಿಕ ಹಾಗೂ ಜಾಗತಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ' ಜೈಶಂಕರ್ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೈಶಂಕರ್ ಸೋಮವಾರ ನ್ಯೂಝಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್, ಮಲೇಶ್ಯಾ ವಿದೇಶಾಂಗ ಸಚಿವ ಮುಹಮ್ಮದ್ ಹಸನ್ ಅವರನ್ನೂ ಭೇಟಿಯಾಗಿರುವುದಾಗಿ ವಿದೇಶಾಂಗ ಇಲಾಖೆ ಹೇಳಿದೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News