ಜಪಾನ್ ಪ್ರಧಾನಿ ಶಿಗೇರು ಇಶಿಬಾ ರಾಜೀನಾಮೆ
ಶಿಗೇರು ಇಶಿಬಾ (Photo credit: AP)
ಹೊಸದಿಲ್ಲಿ : ಜಪಾನ್ ಪ್ರಧಾನಿ ಶಿಗೇರು ಇಶಿಬಾ ರಾಜೀನಾಮೆ ನೀಡಿರುವ ಬಗ್ಗೆ ವರದಿಯಾಗಿದೆ.
ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ವಿಭಜನೆಯನ್ನು ತಡೆಗಟ್ಟಲು ಶಿಗೇರು ಇಶಿಬಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
"ನಾನು ಲಿಬರಲ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮತ್ತು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ" ಎಂದು ಇಶಿಬಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಅಧ್ಯಕ್ಷೀಯ ಚುನಾವಣೆಯ ಕಾರ್ಯವಿಧಾನಗಳನ್ನು ಕೈಗೊಳ್ಳಲು ನಾನು ಪ್ರಧಾನ ಕಾರ್ಯದರ್ಶಿ ಮೊರಿಯಾಮಾ ಅವರಿಗೆ ಹೇಳಿದ್ದೇನೆ. ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಅವರು ಪ್ರಾರಂಭಿಸಬೇಕೆಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.
ಜಪಾನ್ ರಾಜಕೀಯದಲ್ಲಿ ಕಳೆದ 5 ವರ್ಷಗಳಿಂದ ರಾಜಕೀಯ ಅಸ್ಥಿರತೆ ಮುಂದುವರಿದಿದೆ. ಕಳೆದ ಜುಲೈನಲ್ಲಿ ನಡೆದ ಜಪಾನ್ ಸಂಸತ್ತಿನ ಮೇಲ್ಮನೆ ಚುನಾವಣೆಯಲ್ಲಿನ ಸೋಲಿನ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಮೈತ್ರಿಕೂಟದಿಂದ ಶಿಗೇರು ಇಶಿಬಾ ಅವರಿಗೆ ಒತ್ತಡ ಹೆಚ್ಚಿತ್ತು ಎಂದು ಹೇಳಲಾಗಿದೆ.