ಇಸ್ರೇಲ್ | ಜೆರುಸಲೇಂನಲ್ಲಿ ಭಾರತೀಯ ಕಾರ್ಮಿಕನ ಮೃತದೇಹ ಪತ್ತೆ
Update: 2026-07-24 21:30 IST
Photo Credit : AP
ಜೆರುಸಲೇಂ, ಜು.24: ಇಸ್ರೇಲ್‍ನಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ವ್ಯಕ್ತಿಯೊಬ್ಬರು ಜೆರುಸಲೇಂನ ಕಟಾಮೋನ್ ಬಡಾವಣೆಯ ಅಪಾರ್ಟ್‍ಮೆಂಟ್ ಒಂದರಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
40 ವರ್ಷದ ಸಂತ್ರಸ್ತ ವ್ಯಕ್ತಿಯು ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೊಲೆಯಲ್ಲಿ ಭಾಗಿಯಾಗಿರುವ ಶಂಕೆಯಲ್ಲಿ ಈಲಟ್ ನಗರದಲ್ಲಿ ಒಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ `ದಿ ಟೈಮ್ಸ್ ಆಫ್ ಇಸ್ರೇಲ್' ವರದಿ ಮಾಡಿದೆ.