×
Ad

ಎಚ್-1ಬಿ ವೀಸಾ ಶುಲ್ಕ ಹೆಚ್ಚಳ ಪ್ರಶ್ನಿಸಿ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ

Update: 2025-10-17 21:41 IST

ಸಾಂದರ್ಭಿಕ ಚಿತ್ರ | Photo Credit : freepik.com

ವಾಷಿಂಗ್ಟನ್, ಅ.17: ಎಚ್-1ಬಿ ವೀಸಾ ಕೋರಿ ಸಲ್ಲಿಸುವ ಹೊಸ ಅರ್ಜಿಗಳ ಮೇಲೆ 1 ಲಕ್ಷ ಡಾಲರ್ ಶುಲ್ಕ ವಿಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ನಿರ್ಧಾರವನ್ನು ಪ್ರಶ್ನಿಸಿ ಅಮೆರಿಕದ ಚೇಂಬರ್ ಆಫ್ ಕಾಮರ್ಸ್(ವಾಣಿಜ್ಯ ಮಂಡಳಿ) ಮೊಕದ್ದಮೆ ದಾಖಲಿಸಿರುವುದಾಗಿ ವರದಿಯಾಗಿದೆ.

ಈ ಕಾನೂನುಬಾಹಿರ ಮತ್ತು ತಪ್ಪು ನೀತಿಯು ಅಮೆರಿಕಾದ ನಾವೀನ್ಯತೆ ಮತ್ತು ಸ್ಪರ್ಧಾತ್ಮಕತೆಗೆ ಹಾನಿ ಎಸಗಬಹುದು ಎಂದು ಕೊಲಂಬಿಯಾದ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ದಾಖಲಿಸಿರುವ ದಾವೆಯಲ್ಲಿ ಉಲ್ಲೇಖಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News