ಲೆಬನಾನ್ | ಇಸ್ರೇಲ್ ದಾಳಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮೃತ್ಯು
Update: 2026-07-06 22:00 IST
Photo Credit : AP
ಬೈರೂತ್, ಜು.6: ಕದನ ವಿರಾಮ ಜಾರಿಯಲ್ಲಿದ್ದರೂ ಸೋಮವಾರ ದಕ್ಷಿಣ ಲೆಬನಾನ್‍ನಲ್ಲಿ ಕಾರೊಂದರ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಲೆಬನಾನ್‍ನ ಸರಕಾರಿ ಸ್ವಾಮ್ಯದ ಮಾಧ್ಯಮ ತಿಳಿಸಿದೆ.
ನಬಾತಿಯಾ ಅಲ್-ಫಾವ್ಕಾದಲ್ಲಿರುವ ತಮ್ಮ ಕುಟುಂಬದ ಮನೆಗೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ಡ್ರೋನ್ ದಾಳಿ ನಡೆಸಿದೆ. ದಾಳಿಯಲ್ಲಿ ಶಾಲೆಯೊಂದರ ಪ್ರಾಂಶುಪಾಲೆ, ಅವರ ತಾಯಿ, ಒಬ್ಬ ವಿದೇಶಿ ಮಹಿಳೆ ಮತ್ತು ಸಿರಿಯಾದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯು ತಿಳಿಸಿದೆ.