ಲೆಬನಾನ್ | ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇಬ್ಬರು ಮೃತ್ಯು
Update: 2024-06-03 22:04 IST
ಸಾಂದರ್ಭಿಕ ಚಿತ್ರ
ಬೈರೂತ್ : ದಕ್ಷಿಣ ಲೆಬನಾನ್‍ನ ನಗರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ಉನ್ನತ ಮೂಲಗಳನ್ನು ಉಲ್ಲೇಖಿಸಿ ಸರಕಾರಿ ಸ್ವಾಮ್ಯದ `ನ್ಯಾಷನಲ್ ನ್ಯೂಸ್ ಏಜೆನ್ಸಿ(ಎನ್‍ಎನ್‍ಎ) ಸೋಮವಾರ ವರದಿ ಮಾಡಿದೆ.
ಇಸ್ರೇಲ್ ಗಡಿಯ ಸಮೀಪದಲ್ಲಿರುವ ನಖುರಾ ನಗರದಲ್ಲಿ ಬೈಕನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಮತ್ತೊಬ್ಬ ಗಾಯಗೊಂಡಿದ್ದಾನೆ. ಝರಿಯೆಹ್ ನಗರದಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಕಾರನ್ನು ಗುರಿಯಾಗಿಸಿ ಡ್ರೋನ್ ದಾಳಿ ನಡೆದಿದ್ದು ಓರ್ವ ಮೃತಪಟ್ಟಿದ್ದಾನೆ ಎಂದು ವರದಿ ಹೇಳಿದೆ. ಈ ಮಧ್ಯೆ, ಇಸ್ರೇಲ್ ಸೇನೆ ನಡೆಸಿದ ದಾಳಿಗೆ ಪ್ರತಿಯಾಗಿ ಉತ್ತರ ಇಸ್ರೇಲ್‍ನಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಸ್ಫೋಟಕಗಳು ತುಂಬಿದ್ದ ಡ್ರೋನ್‍ಗಳನ್ನು ಪ್ರಯೋಗಿಸಿರುವುದಾಗಿ ಲೆಬನಾನ್‍ನಲ್ಲಿ ನೆಲೆ ಹೊಂದಿರುವ ಹಿಜ್ಬುಲ್ಲಾ ಸಶಸ್ತ್ರ ಹೋರಾಟಗಾರರ ಗುಂಪು ಹೇಳಿಕೆ ನೀಡಿದೆ.