Screengrab : X \ @QaziShahid786

ಕ್ವೆಟ್ಟಾ, ನ. 11: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತದ ಕ್ವೆಟ್ಟಾ–ಕರಾಚಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪ್ರಮುಖ ಸೇತುವೆಯೊಂದನ್ನು ಸ್ಫೋಟಿಸಲಾಗಿದೆ. ಇದರಿಂದಾಗಿ ಎರಡೂ ನಗರಗಳ ನಡುವಿನ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಮಸ್ತುಂಗ್ ಜಿಲ್ಲೆಯ ಖಡ್ಕೋಚಾ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದೆ. ಅತ್ಯಂತ ಆಯಕಟ್ಟಿನ ಹಾಗೂ ಪ್ರಮುಖವಾದ ಈ ಹೆದ್ದಾರಿಯ ಸೇತುವೆಯನ್ನು ಸ್ಫೋಟಕಗಳನ್ನು ಬಳಸಿ ಸ್ಫೋಟಿಸಲಾಗಿದೆ. ಇದರಿಂದ ಪ್ರಾಂತದ ರಾಜಧಾನಿ ಕ್ವೆಟ್ಟಾವನ್ನು ಪಾಕಿಸ್ತಾನದ ವಾಣಿಜ್ಯ ರಾಜಧಾನಿಯಾದ ಕರಾಚಿಯೊಂದಿಗೆ ಸಂಪರ್ಕಿಸುವ ಪ್ರಮುಖ ರಸ್ತೆ ಸಂಪರ್ಕ ಕಡಿತಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor