×
Ad

ಅಮೆರಿಕದಿಂದ ದಾಳಿ: ದಕ್ಷಿಣ ಇರಾನ್‌ ನಲ್ಲಿ 30ಕ್ಕೂ ಅಧಿಕ ನಾಗರಿಕರು ಮೃತ್ಯು

Update: 2026-07-15 13:46 IST
File Photo: PTI

ಟೆಹ್ರಾನ್: ದಕ್ಷಿಣ ಇರಾನ್‌ ನಲ್ಲಿ ಕಳೆದ ಕೆಲವು ದಿನಗಳಿಂದ ಅಮೆರಿಕ ನಡೆಸಿದ ದಾಳಿಗಳಲ್ಲಿ 30ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರದ ವಕ್ತಾರೆ ಫಾತಿಮೆಹ್ ಮೊಹಜೆರಾನಿ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, "ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನಮ್ಮ ಸಂತಾಪ ಹಾಗೂ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇವೆ. ಮೃತರಿಗೆ ನಾವು ಗೌರವ ಸಲ್ಲಿಸುತ್ತೇವೆ" ಎಂದು ಹೇಳಿದ್ದಾರೆ.

"ಸರ್ಕಾರವು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಜನರ ಬೆಂಬಲಕ್ಕೆ ನಿಲ್ಲಲಿದೆ. ಇರಾನ್‌ನ ದಕ್ಷಿಣ ಭಾಗವು ಈ ದೇಶದ ಮಿಡಿಯುವ ಹೃದಯವಾಗಿದೆ" ಎಂದೂ ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ದಕ್ಷಿಣ ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ ಎಂದು ಮೊಹಜೆರಾನಿ ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News