UAE | ಫುಜೈರಾದಲ್ಲಿ ಸರಣಿ ಅಪಘಾತ: 14 ಜನರು ಮೃತ್ಯು
ಅಬುಧಾಬಿ: ಯುಎಇಯ ಫುಜೈರಾದ ಎಮಿರೇಟ್‍ನಲ್ಲಿ 18 ಕಾರುಗಳು ಮತ್ತು ಐದು ಟ್ರಕ್‍ಗಳು ಒಳಗೊಂಡಂತೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 14 ಜನರು ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಯುಎಇ ಆಂತರಿಕ ಸಚಿವಾಲಯ ಗುರುವಾರ ತಿಳಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಒಟ್ಟು 23 ವಾಹನಗಳು ಜಖಂಗೊಂಡಿವೆ. ತುರ್ತು ರಕ್ಷಣಾ ತಂಡಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಘಟನಾ ಸ್ಥಳದಲ್ಲೇ ಇದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಮೃತರ ಗುರುತು ಅಥವಾ ಅಪಘಾತಕ್ಕೆ ಕಾರಣವಾದ ಸಂದರ್ಭಗಳ ಕುರಿತು ತಕ್ಷಣಕ್ಕೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.