×
Ad

ನಮೀಬಿಯಾ ಅಧ್ಯಕ್ಷ ಹೇಗ್ ಜಿಂಗೋಬ್ ನಿಧನ

Update: 2024-02-04 22:08 IST

Photo:NDTV

ವಿಂದೋಕ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಮೀಬಿಯಾ ಅಧ್ಯಕ್ಷ ಹೇಗ್ ಜಿಂಗೋಬ್ (82) ರವಿವಾರ ಬೆಳಿಗ್ಗೆ ನಿಧನರಾಗಿದ್ದಾರೆ ಎಂದು ನಮೀಬಿಯಾ ಸರಕಾರ ಹೇಳಿದೆ.

ಕಳೆದ ತಿಂಗಳು ವೈದ್ಯಕೀಯ ತಪಾಸಣೆ ಸಂದರ್ಭ ಜಿಂಗೋಬ್‍ರಲ್ಲಿ ಕ್ಯಾನ್ಸರ್ ರೋಗ ಲಕ್ಷಣ ಪತ್ತೆಯಾಗಿತ್ತು. ಆದ್ದರಿಂದ ಅವರು ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಲು ನಿರ್ಧರಿಸಿದ್ದರು. ಈ ಮಧ್ಯೆ, ಕೆಲ ದಿನಗಳ ಹಿಂದೆ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ರಾಜಧಾನಿ ವಿಂದೋಕ್‍ನ ಲೇಡಿ ಪೊಹಂಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ರವಿವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಂಗೋಬ್ 2015ರಿಂದ ನಮೀಬಿಯಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಈ ವರ್ಷಾಂತ್ಯಕ್ಕೆ ನಮೀಬಿಯಾದಲ್ಲಿ ಅಧ್ಯಕ್ಷೀಯ ಮತ್ತು ಸಂಸದೀಯ ಚುನಾವಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News