×
Ad

ಮಧ್ಯಪ್ರಾಚ್ಯ ಸಂಘರ್ಷ : NATO ಶೃಂಗಸಭೆಯಿಂದ ಹೊರಗುಳಿಯಲು ನಿರ್ಧರಿಸಿದ ಜಪಾನ್ ಪ್ರಧಾನಿ ಇಷಿಬಾ , ದಕ್ಷಿಣ ಕೊರಿಯಾದ ಲೀ ಜೇ

Update: 2025-06-24 11:09 IST

Photo | nato.int

ಟೆಹರಾನ್ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮತ್ತು ಇರಾನ್ ಮೇಲೆ ಅಮೆರಿಕ ನಡೆಸಿದ ದಾಳಿಯ ಹಿನ್ನೆಲೆ ಜಪಾನ್ ಮತ್ತು ದಕ್ಷಿಣ ಕೊರಿಯಾದ ನಾಯಕರು NATO ಶೃಂಗಸಭೆಯಿಂದ ಹೊರಗುಳಿಯಲು ತೀರ್ಮಾನಿಸಿದ್ದಾರೆ ಎಂದು Aljazeera ವರದಿ ಮಾಡಿದೆ.

ನೆದರ್ಲ್ಯಾಂಡ್‌ನ ಹೇಗ್‌ನಲ್ಲಿ ನಡೆಯಲಿರುವ NATO ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುವ ತಮ್ಮ ನಿರ್ಧಾರವನ್ನು ಜಪಾನ್ ಪ್ರಧಾನಿ ಇಷಿಬಾ ಶಿಗೇರು ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ-ಮ್ಯುಂಗ್ ರದ್ದುಗೊಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿನ ಅಸ್ಥಿರ ಪರಿಸ್ಥಿತಿಯಿಂದಾಗಿ NATO ನಾಯಕರ ಶೃಂಗಸಭೆಗೆ ಲೀ ಜೇ-ಮ್ಯುಂಗ್ ಅವರು ಗೈರಾಗಲಿದ್ದಾರೆ ಎಂದು ದಕ್ಷಿಣ ಕೊರಿಯಾದ ಅಧ್ಯಕ್ಷೀಯ ಕಚೇರಿಯ ವಕ್ತಾರರು ತಿಳಿಸಿದ್ದಾರೆ.

ಶೃಂಗಸಭೆಗೆ NATO ಅಲ್ಲದ ದೇಶಗಳಾದ ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಜಪಾನ್ ಮತ್ತು ದಕ್ಷಿಣ ಕೊರಿಯಾಕ್ಕೆ ಅಹ್ವಾನಿಸಲಾಗಿತ್ತು. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕಳೆದ ವಾರ ನಾನು ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರು.

ಮೂವರೂ ನಾಯಕರು ತಮ್ಮ ಪ್ರತಿನಿಧಿಗಳನ್ನು ಸಭೆಗೆ ಕಳುಹಿಸಲಿದ್ದಾರೆ ಎನ್ನಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News