Nepal | ಹಠಾತ್ ಪ್ರವಾಹ ಪೀಡಿತ ಪ್ರದೇಶಗಳಿಗೆ ಭಾರತದಿಂದ 10 ಟನ್ ನೆರವು ಸಾಮಗ್ರಿ ರವಾನೆ
Photo credit: indiatoday.in
ಕಠ್ಮಂಡು, ಆ. 26: ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಿ ಬಾಲೆನ್ ಶಾ ಬುಧವಾರ ದೂರವಾಣಿ ಮಾತುಕತೆ ನಡೆಸಿದ್ದು, ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಹಲವಾರು ಮಂದಿ ಮೃತಪಟ್ಟಿರುವುದಕ್ಕೆ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತವು ಔಷಧಿ, ಆಹಾರ ಸೇರಿದಂತೆ 10 ಟನ್ ನೆರವು ಸಾಮಗ್ರಿಗಳನ್ನು ನೇಪಾಳದ ಪ್ರವಾಹ ಪೀಡಿತ ಪ್ರದೇಶಗಳಿಗೆ ರವಾನಿಸಿದೆ.
ಈ ಬಗ್ಗೆ ಮೋದಿಯವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಈ ಸಂಕಷ್ಟದ ಸಮಯದಲ್ಲಿ ಭಾರತದ ಜನರು ನೇಪಾಳದಲ್ಲಿರುವ ಅವರ ಸೋದರಿಯರು ಹಾಗೂ ಸೋದರರ ಜೊತೆಗಿದ್ದಾರೆ ಎಂದು ಮೋದಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ನೇಪಾಳಕ್ಕೆ ಸಾಧ್ಯವಿರುವ ಎಲ್ಲ ಮಾನವೀಯ ನೆರವನ್ನು ಒದಗಿಸುವ ಕೊಡುಗೆಯನ್ನು ಕೂಡಾ ಪ್ರಧಾನಿ ನೀಡಿದ್ದಾರೆ. ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳಲ್ಲಿ ಭಾರತವು ನೇಪಾಳದ ಸಮನ್ವಯದಿಂದ ಕೆಲಸ ಮಾಡಲಿದೆಯೆಂದು ಪ್ರಧಾನಿ ಹೇಳಿದ್ದಾರೆ.