×
Ad

ನೇಪಾಳ | ಸಾಮಾಜಿಕ ಮಾಧ್ಯಮಗಳ ನಿಷೇಧದ ವಿರುದ್ಧ ಭುಗಿಲೆದ್ದ ಪ್ರತಿಭಟನೆ : ಭದ್ರತಾಪಡೆಗಳ ಗುಂಡಿನ ದಾಳಿಗೆ 9 ಮಂದಿ ಮೃತ್ಯು

Update: 2025-09-08 16:16 IST

Photo credit: PTI

ಕಠ್ಮಂಡು : ಕೆಪಿ ಶರ್ಮಾ ಓಲಿ ಸರಕಾರದಲ್ಲಿನ ಭ್ರಷ್ಟಾಚಾರ ಮತ್ತು 26 ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ಸರಕಾರದ ಕ್ರಮದ ವಿರುದ್ಧ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ನಡೆದ ʼಜೆನ್ ಝಡ್ʼ ಬೃಹತ್‌ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಈ ವೇಳೆ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ.

ಸಂಸತ್ತಿನ ಬಳಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಭದ್ರತಾ ಪಡೆಗಳು ಗುಂಡು ಹಾರಿಸಿದ ಪರಿಣಾಮವಾಗಿ 9 ಮಂದಿ ಪ್ರತಿಭಟನಾಕಾರರು ಮೃತಪಟ್ಟಿದ್ದಾರೆ. 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

'ಜೆನ್ ಝೆಡ್ ರೆವಲ್ಯೂಷನ್'(Gen Z Revolution) ನಲ್ಲಿ ಸಾವಿರಾರು ಯುವ ಪ್ರತಿಭಟನಾಕಾರರು ಭಾಗವಹಿಸಿದ್ದರು. ಅನೇಕರು ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದರು. ಪೊಲೀಸ್ ಬ್ಯಾರಿಕೇಡ್‌ಗಳನ್ನು ತೆಗೆದು ಹಾಕಿ ಮುನ್ನುಗ್ಗಿದ್ದಾರೆ. ಘರ್ಷಣೆ ಉಲ್ಬಣಗೊಳ್ಳುತ್ತಿದ್ದಂತೆ ಪೊಲೀಸರು ಹಲವೆಡೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News