Screengrab : X 

ಕಠ್ಮಂಡು, ಆ.28: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಕೊಚ್ಚಿಹೋದ ಮಹಿಳೆಯ ಮೃತದೇಹದಿಂದ ಚಿನ್ನದ ಓಲೆಗಳನ್ನು ಕದಿಯುತ್ತಿದ್ದ ಇಬ್ಬರನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ.

ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋದ ಮಹಿಳೆಯ ಮೃತದೇಹದಿಂದ ಇಬ್ಬರು ವ್ಯಕ್ತಿಗಳು ಚಿನ್ನದ ಓಲೆಗಳನ್ನು ತೆಗೆಯುತ್ತಿರುವ ವೀಡಿಯೊ ವೈರಲ್ ಆದ ನಂತರ ಈ ಬಂಧನ ನಡೆದಿದೆ. ವೈರಲ್ ಆದ ವೀಡಿಯೊದಲ್ಲಿ, ವ್ಯಕ್ತಿಗಳು ಮರದ ಹಲಗೆಗಳ ಸಹಾಯದಿಂದ ಮಹಿಳೆಯ ಶವವನ್ನು ನೀರಿನಿಂದ ಹೊರಗೆ ಎಳೆಯುತ್ತಿರುವುದು ಕಂಡುಬಂದಿದೆ. ನಂತರ ಅವರು ಆಕೆಯ ಕೂದಲು ಹಿಡಿದು ಎಳೆದು, ಎರಡೂ ಕಿವಿಗಳಲ್ಲಿದ್ದ ಓಲೆಗಳನ್ನು ತೆಗೆದು ಪಕ್ಕಕ್ಕೆ ಇರಿಸಿದ್ದಾರೆ. ಈ ವೇಳೆ ಅಲ್ಲಿದ್ದ ಹಲವರು ಘಟನೆಯ ವೀಡಿಯೊ ರೆಕಾರ್ಡ್ ಮಾಡಿದ್ದಾರೆ. ವೀಡಿಯೊದ ಆಧಾರದ ಮೇಲೆ, ಪೊಲೀಸರು ಆ ಇಬ್ಬರು ವ್ಯಕ್ತಿಗಳನ್ನು 25 ವರ್ಷದ ಮದನ್ ಗುರುಂಗ್ ಮತ್ತು 38 ವರ್ಷದ ಉಮೇಶ್ ಚೌಧರಿ ಎಂದು ಗುರುತಿಸಿದ್ದಾರೆ. ಬಳಿಕ ಇವರನ್ನು ಭರತ್‌ಪುರ ಮೆಟ್ರೋಪಾಲಿಟನ್ ಸಿಟಿ-1ರ ಪೋಖರಾ ಬಸ್ ಪಾರ್ಕ್ ಬಳಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor