×
Ad

ಆಸ್ಟ್ರೇಲಿಯಾ: ಚೂರಿಯಿಂದ ದಾಳಿ ನಡೆಸಿದ ಯುವಕ ಪೊಲೀಸ್ ಗುಂಡೇಟಿಗೆ ಬಲಿ

Update: 2024-05-05 22:49 IST

ಸಾಂದರ್ಭಿಕ ಚಿತ್ರ

ಸಿಡ್ನಿ ಆಸ್ಟ್ರೇಲಿಯಾದ ಪರ್ತ್‍ನಲ್ಲಿ ವ್ಯಕ್ತಿಯೊಬ್ಬನನ್ನು ಚೂರಿಯಿಂದ ಇರಿದು ಗಾಯಗೊಳಿಸಿ, ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ.

ಪರ್ತ್‍ನ ದಕ್ಷಿಣದಲ್ಲಿರುವ ವಿಲೆಟ್ಟನ್ ನಗರದ ಕಾರು ಪಾರ್ಕಿಂಗ್ ಪ್ರದೇಶದಲ್ಲಿ 16 ವರ್ಷದ ಯುವಕನೊಬ್ಬ ಹಿಂಸಾತ್ಮಕ ರೀತಿಯಲ್ಲಿ ವರ್ತಿಸುತ್ತಿದ್ದು ಓರ್ವ ವ್ಯಕ್ತಿಯನ್ನು ಚೂರಿಯಿಂದ ಇರಿದು ಗಾಯಗೊಳಿಸಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಶರಣಾಗುವಂತೆ ಸೂಚಿಸಿದರೂ ನಿರಾಕರಿಸಿದ ಆರೋಪಿ ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದಾನೆ. ಆಗ ಪೊಲೀಸರು ಎಚ್ಚರಿಕೆಯ ಗುಂಡು ಹಾರಿಸಿದರೂ ಆತ ನಿರ್ಲಕ್ಷಿಸಿ ಪೊಲೀಸರತ್ತ ಚೂರಿ ಬೀಸಿದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದಾರೆ. ತೀವ್ರ ಗಾಯಗೊಂಡ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News