ಒಮಾನ್‍ | ವಾಹನ ಉರುಳಿ ಬಿದ್ದು ಭಾರತೀಯ ಮೃತ್ಯು

Update: 2026-08-23 23:37 IST

Photo: RoyalOmanPolice/X

ಮಸ್ಕತ್: ಒಮಾನ್‍ನಲ್ಲಿ ಭಾರತೀಯ ನಾಗರಿಕರಿದ್ದ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಉರುಳಿ ಬಿದ್ದ ಪರಿಣಾಮ ಒಬ್ಬರು ಮೃತಪಟ್ಟು, 9 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪಘಾತವು ಹೈಮಾ ವಿಲಾಯತ್‍ನ ಸುಲ್ತಾನ್ ಸಯೀದ್ ಬಿನ್ ತೈಮೂರ್ ರಸ್ತೆಯಲ್ಲಿ ಸಂಭವಿಸಿದೆ. ಘಟನಾ ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದು, 9 ಜನ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹೆಲಿಕಾಪ್ಟರ್ ಮೂಲಕ, ಉಳಿದ ಏಳು ಗಾಯಾಳುಗಳನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News