ಪಾಕ್ ಸೇನೆಯಿಂದ ಕಾರ್ಯಾಚರಣೆ : 30 ಭಯೋತ್ಪಾದಕರ ಹತ್ಯೆ
Update: 2025-10-10 21:30 IST
ಸಾಂದರ್ಭಿಕ ಚಿತ್ರ | Photo Credit : NDTV
ಇಸ್ಲಮಾಬಾದ್, ಅ.10: ಪಾಕಿಸ್ತಾನದಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್(ಟಿಟಿಪಿ)ಗೆ ಸೇರಿದ 30 ಭಯೋತ್ಪಾದಕರನ್ನು ಹತ್ಯೆ ಮಾಡಿರುವುದಾಗಿ ಪಾಕ್ ಸೇನೆ ಶುಕ್ರವಾರ ತಿಳಿಸಿದೆ.
ಒರಾಕ್ಝಾಯ್ ಜಿಲ್ಲೆಯಲ್ಲಿ ಅಕ್ಟೋಬರ್ 7ರಂದು ಭಯೋತ್ಪಾದಕರು ನಡೆಸಿದ್ದ ಹೊಂಚು ದಾಳಿಯಲ್ಲಿ 11 ಪಾಕ್ ಸೈನಿಕರು ಮೃತಪಟ್ಟಿದ್ದರು. ಒರಾಕ್ಝಾಯ್ ಜಿಲ್ಲೆಯಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ಅಕ್ಟೋಬರ್ 7ರಂದು ನಡೆದಿದ್ದ ಹೊಂಚು ದಾಳಿಯಲ್ಲಿ ಪಾಲ್ಗೊಂಡಿದ್ದ 30 ಭಯೋತ್ಪಾದಕರನ್ನು ಹತ್ಯೆ ಮಾಡಿರುವುದಾಗಿ ಪಾಕ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.