ಪಾಕಿಸ್ತಾನ ಪಡೆಗಳ ಕಾರ್ಯಾಚರಣೆ | ಕನಿಷ್ಠ 18 ಉಗ್ರರ ಹತ್ಯೆ: ವರದಿ
ಸಾಂದರ್ಭಿಕ ಚಿತ್ರ | Photo Credit : aljazeera.com
ಪೇಷಾವರ, ಅ. 7: ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನದಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 18 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬುಧವಾರ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.
ಖೈಬರ್ ಪಖ್ತುನ್ಖ್ವಾದ ಉತ್ತರ ವಜೀರಿಸ್ತಾನ್ ನಲ್ಲಿ ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆ ನಡೆಸಿ ತೆಹ್ರೀಕೆ-ತಾಲಿಬಾನ್ ಪಾಕಿಸ್ತಾನ್ ಸಂಘಟನೆಯ 13 ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಐದು ಉಗ್ರರನ್ನು ಹತ್ಯೆ ಮಾಡಿವೆ. ಹತರಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ‘ಡಾನ್’ ಪತ್ರಿಕೆ ವರದಿ ಮಾಡಿದೆ.